ರಾಜ್ಯ

ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ ಇನ್ನಿಲ್ಲ

ಬೆಂಗಳೂರು prajakiran.com : ರಾಜ್ಯದ ಮಾಜಿ ಸಚಿವರಾಗಿದ್ದ ಪ್ರೊ. ಮುಮ್ತಾಜ್ ಅಲಿ ಖಾನ್ ನಿಧನ ಹೊಂದಿದ್ದಾರೆ.

94 ವರ್ಷದ ಮುಮ್ತಾಜ್ ಅಲಿ ಖಾನ್ ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಬೆಂಗಳೂರಿನ ಗಂಗಾನಗರದ ತಮ್ಮ ನಿವಾಸದಲ್ಲಿ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ.

ಅವರು 2008ರಲ್ಲಿ ಯಡಿಯೂರಪ್ಪ ಅವರ ಸಂಪುಟದಲ್ಲಿ  ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಹತ್ತಾರು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದರು.

ಅವರ ಅಗಲಿಕೆಗೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *