ಅಂತಾರಾಷ್ಟ್ರೀಯ

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ prajakiran.com : ಮಾಜಿ ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರ ಆರೋಗ್ಯದಲ್ಲಿ ಭಾನುವಾರ ರಾತ್ರಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ರಾತ್ರಿ 8.45ರ ಸುಮಾರಿಗೆ ಕರೆದುಕೊಂಡು ಬರಲಾಗಿದೆ ಎಂದು ಏಮ್ಸ್ ಆಸ್ಪತ್ರೆ ಹಿರಿಯ ವೈದ್ಯರು ಖಚಿತಪಡಿಸಿದ್ದಾರೆ.

ಅವರಿಗೆ 2009ರಲ್ಲಿ ಶಸ್ತ್ರ ಚಿಕಿತ್ಸೆ ಆಗಿತ್ತು. ಅಲ್ಲದೆ, ಅವರಿಗೆಬೈ ಪಾಸ್ ಸರ್ಜರಿ ಕೂಡ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಮನಮೋಹನ ಸಿಂಗ್ ಅವರಿಗೆ ಸದ್ಯ 87 ವರ್ಷವಾಗಿದ್ದು,  ಡಾ. ನಿತೀಶ್ ನಾಯ್ಕಅವರ ನೇತೃತ್ವದ ತಂಡದ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ಹಿರಿಯ ಕಾಂಗ್ರೆಸ್ ನಾಯಕರು ಕೂಡ ಆಸ್ಪತ್ರೆಗೆ ಧಾವಿಸಿ ಅವರ ಆರೋಗ್ಯ ವಿಚಾರಿಸಿ, ಸದ್ಯ ಯಾವುದೇ ಆತಂಕ ಪಡುವಅಗತ್ಯವಿಲ್ಲ. ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *