ಪುಣೆ Prajakiran.com : ಪುಣೆ ಜಿಲ್ಲೆಯ ಪಿರಂಗುತ್ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಸೋಮವಾರ ಮಧ್ಯಾಹ್ನದ ಬಳಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಇಡೀ ಕಾರ್ಖಾನೆಗೆ ವ್ಯಾಪಿಸಿದೆ.
ಪಿರಂಗುಟ್ ಗ್ರಾಮದಲ್ಲಿರುವ ಎಸ್ ವಿಎಸ್ ಅಕ್ವಾ ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 20 ಮಂದಿ ಪಾರಾಗಿದ್ದಾರೆ.
ಸದ್ಯ ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.