ಅಪರಾಧ

ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ಮೂಲಕ ಗುತ್ತಿಗೆದಾರನಿಗೆ ವಂಚಿಸಿದ್ದ ವ್ಯಕ್ತಿ ಬಂಧನ

ಧಾರವಾಡ prajakiran.com : ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಮೋಸ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು ಪೊಲೀಸ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ
ಖೆಡ್ಡಾ ತೊಡಲಾಗಿದೆ.

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾರ್ಗದರ್ಶನದಲ್ಲಿ ಧಾರವಾಡ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದ 29 ವರ್ಷದ ಆರೋಪಿ ಪ್ರತಾಪ್ ಡಿ.ಎಂ. ಎಂಬುವನು ಸುಷ್ಮಾ ಸುಸು ಎಂಬ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆಯನ್ನು ತೆರೆದು ಹುಬ್ಬಳ್ಳಿ ತಾಲೂಕಿನ ಗಂಗಿವಾಳ ಗ್ರಾಮದ ರುದ್ರಗೌಡ ಮಲ್ಲನಗೌಡ ಪಾಟೀಲ ಎಂಬ ಗುತ್ತಿಗೆದಾರನಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಫೇಸ್‍ಬುಕ್ ಮುಖಾಂತರ ಪರಿಚಯ ಮಾಡಿಕೊಂಡು 2017 ರಲ್ಲಿ ವಾಟ್ಸಾಪ್ ನಂಬರ್ ಪಡೆದು ಸುಮಾರು 3 ವರ್ಷಗಳಿಂದ ರುದ್ರಗೌಡ ಪಾಟೀಲ ಅವರಿಗೆ ಚಾಟಿಂಗ್ ಮಾಡಿದ್ದಾನೆ.

3 ವರ್ಷಗಳ ಚಾಟಿಂಗ್ ಸಮಯದಲ್ಲಿ ಆರೋಪಿ ಪ್ರತಾಪನು ರುದ್ರಗೌಡನಿಗೆ ತಾನು ಮೂಕಿ, ಕಿವುಡಿ ಇರುತ್ತೇನೆ ಎಂದು ಮೇಸೆಜ್ ಮಾಡುತ್ತಾ ನಾನು ನಿಮ್ಮನ್ನು ಪ್ರೀತಿಸುತ್ತೇನೆ,ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ.

. ರುದ್ರಗೌಡನು ಆರೋಪಿ ಪ್ರತಾಪ ತನಗೆ ಹಾಗೂ ತನ್ನ ಪರಿಚಯಸ್ಥ 8-10 ಜನರ ಬ್ಯಾಂಕ್ ಖಾತೆಗಳಿಗೆ ಸುಮಾರು 14 ರಿಂದ 15 ಲಕ್ಷ ರೂ.ಗಳನ್ನು ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಡಿಸೆಂಬರ್ 9, 2019 ರಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದನು.

ಧಾರವಾಡ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯ ಸಿಪಿಐ ವಿಜಯ ಬಿರಾದಾರ ನೇತೃತ್ವದಲ್ಲಿ ಸಿಬ್ಬಂದಿಗಳು ತನಿಖೆ ಕೈಗೊಂಡು ಜನವರಿ 31, 2021 ರ ಬೆಳಿಗ್ಗೆ 11 ಗಂಟೆಗೆ ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದಲ್ಲಿ ಆರೋಪಿ ಪ್ರತಾಪ ಡಿ.ಎಂ. ನನ್ನು ಬಂಧಿಸಿ, ತನಿಖೆ ಕೈಗೊಂಡು ಮೋಸ ಮಾಡಿ ಪಡೆದ ಹಣದಲ್ಲಿನ ರೂ.1,25,000/-ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ 66 ಡಿ ಮತ್ತು ಐಪಿಸಿ 420 ರ ಕಲಂ ಅಡಿ ಆರೋಪಿ ಪ್ರತಾಪ ಡಿ.ಎಂ. ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸದರಿ ಪ್ರಕರಣದ ತನಿಖಾ ತಂಡವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಡಿವೈಎಸ್‍ಪಿ ಗಳಾದ ರಾಮನಗೌಡ ಹಟ್ಟಿ, ಎಂ.ಬಿ. ಸಂಕದ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ವಿಜಯ ಬಿರಾದಾರ, ಎಎಸ್‍ಐಗಳಾದ ವಿ.ಎಸ್. ಬೆಳಗಾಂವಕರ, ಪಿ.ಜಿ. ಕಾಳಿ, ಆರ್.ಎಸ್. ಜಾಧವ ಮತ್ತು ಸಿಬ್ಬಂದಿಗಳಾದ ಹೆಚ್.ಬಿ. ಐಹೋಳಿ, ಎ.ಎ. ಕಾಕರ, ಬಿ.ಎನ್. ಬಳಗಣ್ಣವರ, ಎ.ಎಂ. ನವಲೂರ, ಆರ್.ಎನ್. ಕಮದೊಡ, ಪಿ.ಜಿ. ಪಾಟೀಲ, ಎಂ.ಜಿ. ಪಾಟೀಲ, ಆರ್.ಎ. ಕಟ್ಟಿ, ಯು.ಎಂ. ಅಗಡಿ, ಬಿ.ಎಸ್. ಭೀಮಕ್ಕನವರ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *