*ಪುಟ್ಟ ಕಂದಮ್ಮನ ಮೇಲೆ ಪಾಪಿ ತಂದೆ ಹಲ್ಲೆ; ಮಗು ಸಾವು*
ಧಾರವಾಡ ಪ್ರಜಾಕಿರಣ ಕಾಮ್ : ಹೆತ್ತ ತಂದೆಯೊಬ್ಬ ಕರುಳಕುಡಿಯ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಮಗು ಜೀವನ್ಮರಣ ನಡುವೆ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.
ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
ಯಾದವಾಡ ಗ್ರಾಮದ ನಿವಾಸಿಯಾಗಿದ್ದ ಶಂಭುಲಿಂಗಯ್ಯ ಶಾಪುರಮಠ ಎಂಬ ಪಾಪಿ ತಂದೆಯೇ ಕುಡಿದ ಮತ್ತಿನಲ್ಲಿ ಒಂದೂವರೆ ವರ್ಷದ ಕಂದಮ್ಮ ಶ್ರೇಯಾ ಶಾಪುರಮಠ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಕಿರಾತಕನಾಗಿದ್ದಾನೆ.
ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.
ಧಾರವಾಡದ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಪಾಪಿ ತಂದೆ ಶಂಭುಲಿಂಗಯ್ಯ ಶಾಪುರಮಠನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.