ಸಿನಿಮಾ

ನಟಿ ರಾಗಿಣಿ ಆಪ್ತ ರವಿಶಂಕರ್ ಬಂಧನ

ನಟಿ ಸಂಜನಾ ಆಪ್ತ ರಾಹುಲ್ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ನಟಿ ರಾಗಿಣಿ ಆಪ್ತ ರವಿಶಂಕರ್ ಬಂಧನ ಮಾಡಿರುವುದು ಕನ್ನಡ ಸಿನಿಮಾ ರಂಗದಲ್ಲಿ ತಳಮಳ ಸೃಷ್ಟಿಸಿದೆ.

ಅದರ ಬೆನ್ನಲ್ಲೇ ಇನ್ನೊಬ್ಬ ನಟಿ ಸಂಜನಾ ಗಲ್ರಾಣಿ ಅವರ ಆಪ್ತ ರಾಹುಲ್ ಸಿಸಿಬಿ ವಶದಲ್ಲಿದ್ದು, ಆತನ ವಿಚಾರಣೆ ನಡೆದಿದೆ.

ಇದರ ಬೆನ್ನಲ್ಲೇ ನಟಿ ರಾಗಿಣಿ ಕೂಡ ಸಿಸಿಬಿ ಎದುರು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿಯಾಗಿದೆ.

ಶುಕ್ರವಾರ ಸಿಸಿಬಿ ಎದುರು ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿದೆ. ಅದರ ಬೆನ್ನಲ್ಲೇ ನಟಿ ಸಂಜನಾ ಗಲ್ರಾಣಿಯನ್ನು ಕೂಡ ವಿಚಾರಣೆಗೆ ಆಗಮಿಸುವಂತೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪ್ರತೀಕ್ ಶೆಟ್ಟಿ ಸೆರೆ : ಇನ್ನೊಂದು ಕಡೆ ಕೋಕೆನ್ ಡೀಲರ್ ಪ್ರತೀಕ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮುಖಂಡ ಕಾರ್ತಿಕ್ ರಾಜ್ ಜತೆ ಆತ್ಮಿಯತೆ ಹೊಂದಿದ್ದ ಎನ್ನುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *