ಬೆಂಕಿ ಅವಘಡ: ಯಾವುದೇ ಸಾವು ನೋವು ಸಂಭವಿಸಿಲ್ಲ
ದೆಹಲಿ Prajakiran.com : ಇಲ್ಲಿನ ಏಮ್ಸ್ ಆಸ್ಪತ್ರೆಯ ಸ್ಟೋರ್ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ 5ಗಂಟೆಗೆ ಸುಮಾರಿಗೆ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಹಾಗೂ ಇತರೆ ಅಧಿಕಾರಿಗಳು ಎಲ್ಲಾ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.
ಈ ಬೆಂಕಿ ಸಂಸ್ಥೆಯ ಶಿಕ್ಷಣ ಕೊಠಡಿಗೂ ಹರಡಿದ್ದು, ಬೆಂಕಿ ಅವಘಡಕ್ಕೆ ಕಾರಣ ಈವರೆಗೂ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.