ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶಾಂತಿಯುತ ಮತದಾನ

1724 ಸಿಬ್ಬಂದಿಯಿಂದ ಚುನಾವಣಾ ಕಾರ್ಯ 

ಧಾರವಾಡ prajakiran.com : ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕಿನ ಎಲ್ಲ 412 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ನಡೆಯಿತು.

1,724 ಚುನಾವಣಾ ಸಿಬ್ಬಂದಿ ಮತಗಟ್ಟೆಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಿದರು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಧಾರವಾಡ ತಾಲೂಕಿನಲ್ಲಿ 952, ಕಲಘಟಗಿ ತಾಲೂಕಿನಲ್ಲಿ 688 ಮತ್ತು ಅಳ್ನಾವರ ತಾಲೂಕಿನಲ್ಲಿ 84 ಜನ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 1,724 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದರು.

ತುರ್ತು ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ಸುಮಾರು 158 ಸಿಬ್ಬಂದಿಗಳು ಹೆಚ್ಚುವರಿಯಾಗಿ ಸಿದ್ಧಗೊಳಿಸಲಾಗಿತ್ತು .

ಪ್ರತಿ ಮತಗಟ್ಟೆಗೆ ಇಬ್ಬರು ಆರೋಗ್ಯ ಸಿಬ್ಬಂದಿಗಳು, ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಮತ್ತು ಕೋವಿಡ್ ಲಕ್ಷಣಗಳ ತಪಾಸಣೆ ಮಾಡಿದರು.

ಪ್ರತಿ ಸಾಮಾನ್ಯ ಮತಗಟ್ಟೆಗೆ ಓರ್ವ ಹಾಗೂ ಇತರೆ ಮತಗಟ್ಟೆಗಳಿಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿತ್ತು.

ಎಸ್‍ಪಿ ಹಾಗೂ ಡಿವೈಎಸ್‍ಪಿಗಳ ಮಾರ್ಗದರ್ಶನದಲ್ಲಿ ಸಿಪಿಐ, ಪಿಎಸ್‍ಐಗಳು ಸೆಕ್ಟರ್ ಆಫೀಸರ್‍ಗಳನ್ನಾಗಿ ನೇಮಿಸಿದ್ದು, ವಲಯಗಳಲ್ಲಿ ಸಂಚರಿಸಿ ಸೂಕ್ತ ಬಂದೋಬಸ್ತ್ ಹಾಗೂ ಶಾಂತಿಯುತ, ಮುಕ್ತ ಮತದಾನವಾಗಲು ಕ್ರಮ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಡಿಮಾಸ್ಟರಿಂಗ್ ಮತ್ತು ಮತ ಏಣಿಕೆ ಸಿದ್ಧತೆ : (ಡಿಸೆಂಬರ್ 22 ರ) ಸಂಜೆ 5 ಗಂಟೆಯ ನಂತರ ಮತದಾನ ಮುಕ್ತಾಯವಾದ ಮೇಲೆ ಧಾರವಾಡ ತಾಲೂಕಿನ ಎಲ್ಲ ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಧಾರವಾಡ ನಗರದ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆಗೆ ಮತ್ತು ಕಲಘಟಗಿ ತಾಲೂಕಿನ ಎಲ್ಲ ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಕಲಘಟಗಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಗೆ ಹಾಗೂ ಅಳ್ನಾವರ ತಾಲೂಕಿನ ಎಲ್ಲ ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಅಳ್ನಾವರ ಪಟ್ಟಣದ ಸೇಂಟ್ ಥೆರೆಸಾ ಪ್ರೌಢಶಾಲೆಗೆ ತೆಗೆದುಕೊಂಡು ಬಂದು, ಡಿಮಾಸ್ಟರಿಂಗ್ ಮಾಡಿ ಎಲ್ಲ ಮತಪೆಟ್ಟಿಗೆಗಳನ್ನು ಭದ್ರವಾಗಿ ಇಡಲಾಗುತ್ತದೆ.

ಡಿಸೆಂಬರ್ 30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ನಡೆಯಲಿದೆ. ಧಾರವಾಡ ತಾಲೂಕಿನ ಗ್ರಾಮ ಪಂಚಾಯತ್‍ಗಳ ಚುನಾವಣೆಯ ಮತ ಏಣಿಕೆ ಕಾರ್ಯ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ್ತು ಕಲಘಟಗಿ ತಾಲೂಕಿನ ಗ್ರಾಮಪಂಚಾಯತ್‍ಗಳ ಚುನಾವಣೆಯ ಮತ ಏಣಿಕೆ ಕಾರ್ಯ ಕಲಘಟಗಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಗೂ ಅಳ್ನಾವರ ತಾಲೂಕಿನ ಗ್ರಾಮಪಂಚಾಯತ್‍ಗಳ ಚುನಾವಣೆಯ ಮತ ಏಣಿಕೆ ಕಾರ್ಯವು ಅಳ್ನಾವರ ಪಟ್ಟಣದ ಸೇಂಟ್ ಥೆರೆಸಾ ಪ್ರೌಢಶಾಲೆಯಲ್ಲಿ ಜರುಗಲಿದೆ.

ಮತಪೆಟ್ಟಿಗೆಗಳ ಸುರಕ್ಷತೆಗೆ ಅಗತ್ಯ ಬಂದೋಬಸ್ತ್ ಮಾಡಲಾಗಿದ್ದು, ಮತ ಏಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಕೋವಿಡ್ ಸೋಂಕಿತ ವ್ಯಕ್ತಿಯಿಂದ ಮತದಾನ :

ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮ ಪಂಚಾಯತಿಯ ನೆಲ್ಲಿಹರವಿ ಮತಗಟ್ಟೆಯಲ್ಲಿ ಬಮ್ಮಿಗಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೋವಿಡ್ ಸೋಂಕಿತ ವ್ಯಕ್ತಿಯೋರ್ವರು ಇಂದು ಮತದಾನ ಅವಧಿಯ ಕೊನೆಯ ಸಮಯದಲ್ಲಿ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಎಸ್‍ಓಪಿ ನಿಯಮದಂತೆ ಆರೋಗ್ಯ ಇಲಾಖೆಯಿಂದ ಸೋಂಕಿತ ವ್ಯಕ್ತಿಗೆ ಪಿಪಿಇ ಕಿಟ್ ಧರಿಸಿ, ಸ್ವಯಂ ಸುರಕ್ಷತಾ ಕ್ರಮಗಳೊಂದಿಗೆ ಮತ ಚಲಾಯಿಸಲು ಅವಕಾಶ ಮಾಡಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಮತಗಟ್ಟೆಯ ಅಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *