ರಾಜ್ಯ

ಗದಗ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ…!

ಮಂಜುನಾಥಸಿಂಗ್ ರಾಠೋಢ

ಗದಗ : ಮಲಪ್ರಭಾ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನವೀಲುತೀರ್ಥ ಡ್ಯಾಂ ನಿಂದ 15 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗಿದೆ.

ಯಾವುದೇ ಸಂದರ್ಭದಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಗ್ರಾಮಗಳ ಜನತೆ ಮುಂಜಾಗ್ರತೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ಜಿಲ್ಲೆಯ ನರಗುಂದ ತಾಲ್ಲೂಕಿನ ಲಕ್ಮಾಪೂರ ಗ್ರಾಮಕ್ಕೆ (ಅಗಸ್ಟ 16) ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ, ಗ್ರಾಮದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವ ಮೂಲಕ ಜನ ಜಾನುವಾರುಗಳನ್ನು ಪ್ರಾಣಾಪಾಯದಿಂದ ಕಾಪಾಡಿಕೊಳ್ಳಬೇಕು ಎಂದು ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಕಳೆದ ಸಾಲಿನ ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಪ್ರವಾಹ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತವು ಅಗತ್ಯದ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.

ಪ್ರವಾಹ ಸಂದರ್ಭದಲ್ಲಿ ನೆರೆ ಸಂತ್ರಸ್ಥರಿಗಾಗಿ ಗುರುತಿಸಲಾದ ಕಾಳಜಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಉಪಚಾರದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಂಡು ಸಂತ್ರಸ್ತರು ಹಾಗೂ ಜಾನುವಾರುಗಳನ್ನು ಸ್ಥಳಾಂತರಿಸಲು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ ಮಾತನಾಡಿ, ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಸಾರ್ವಜನಿಕ ತಿಳುವಳಿಕೆ ನೀಡಲು ತಹಶೀಲ್ದಾರ ಮತ್ತು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜೂಗೌಡ ಕೆಂಚನಗೌಡ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನರಗುಂದ ತಹಶೀಲ್ದಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಇದ್ದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ದಿನದ ಇಪ್ಪತ್ತನಾಲ್ಕು ಗಂಟೆ ಕಾರ್ಯನಿರ್ವಹಿಸಲು ಸನ್ನದ್ಧರಾಗಿರಬೇಕು.  

 ಎಂ.ಸುಂದರೇಶ್ ಬಾಬು, ಜಿಲ್ಲಾಧಿಕಾರಿ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *