ರಾಜ್ಯ

ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ : ನಿದ್ದೆಯಿಂದ ಎಚ್ಚರಗೊಳ್ಳದ ದುರಹಂಕಾರಿ ಬಿಜೆಪಿ ಸರ್ಕಾರ

ಬೆಂಗಳೂರು prajakiran.com : ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ ಡೌನ್ ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಮಳೆರಾಯನ ರೌದ್ರನರ್ತನ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳಲ್ಲಿ ಜನಜೀವನವನ್ನ ಮೂರಾಬಟ್ಟೆ ಮಾಡಿದೆ. 

ಆದರೂ ಈ ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆರೋಪಿಸಿದ್ದಾರೆ.

ಪ್ರವಾಹದಿಂದಾಗಿ ಅನೇಕರು ಮನೆಗಳನ್ನು ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ.

ಅಗತ್ಯ ಮೂಲ ಸೌಕರ್ಯಗಳ ಮರುಸ್ಥಾಪನೆಗಾಗಿ, ಪ್ರವಾಹ ಪೀಡಿತ ಪ್ರತಿ ತಾಲೂಕಿಗೆ ಸರ್ಕಾರವು ಈ ಕೂಡಲೇ ಕನಿಷ್ಠ 1 ಕೋಟಿ ರೂ. ಅನುದಾನ ಸರ್ಕಾರ ಈ ಕೂಡಲೇ ನೀಡಬೇಕು ಎಂದು ಆಗ್ರಹಿಸಿದರು.

ಮನೆಗಳಿಗೆ ನೀರು ನುಗ್ಗಿ ಜನರು ಶೇಖರಿಸಿಟ್ಟಿದ್ದ ದವಸ-ಧಾನ್ಯಗಳೂ ನೀರು ಪಾಲಾಗಿವೆ. ಇಂತಹ ಕುಟುಂಬಗಳಿಗೆ ₹5,000 ತುರ್ತು ಪರಿಹಾರ ನೀಡಬೇಕು.

ಮನೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ, ಮನೆ ಕಳೆದುಕೊಂಡವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು.

ಹಾನಿ ಸಮೀಕ್ಷೆ ನಡೆಸಿ, ವಾರದೊಳಗಡೆ ಬೆಳೆ ಪರಿಹಾರವನ್ನು ರೈತರಿಗೆ ನೀಡಬೇಕು. ಕೊರೋನಾ ಸಾಂಕ್ರಾಮಿಕ ರಾಜ್ಯದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.

ಇದರ ನಡುವೆಯೇ ನೆರೆ ಪರಿಸ್ಥಿತಿ ಉಲ್ಬಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ದಟ್ಟವಾಗಿದೆ.

ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ  ಆಗ್ರಹಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *