ಅಂತಾರಾಷ್ಟ್ರೀಯ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ ವಿಮಾನ ಚಾಲನಾ ತರಬೇತಿ ಕೇಂದ್ರ

ಸಚಿವ ಜೋಶಿಯವರ ಬೇಡಿಕೆಗೆ ಸ್ಪಂದನೆ

ಪೈಲಟ್ ಆಗುವವರಿಗೆ ಸುಸಂಧಿ

ನವದೆಹಲಿ prajakiran.com : ವಾಣಿಜ್ಯ ನಗರಿ ಹುಬ್ಬಳ್ಳಿ ಹಿರಿಮೆಗೆ ಮತ್ತೊಂದು ಗರಿ ಸೇರಲಿದೆ.

 ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ  ಜ್ಯೋತಿರಾದಿತ್ಯ ಸಿಂದಿಯಾ ಮುಂದಾಗಿದ್ದಾರೆಂದು ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಮತ್ತು ಕಲ್ಲಿದ್ದಲು ಇಲಾಖಾ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಈ ಕೇಂದ್ರ ಸ್ಥಾಪನೆಯಿಂದ ರಾಜ್ಯದ ಎರಡನೇ ರಾಜಧಾನಿಯಾಗಿ ಹೊರಹೊಮ್ಮುತ್ತಿರುವ ಹುಬ್ಬಳ್ಳಿಗೆ ಮತ್ತೊಂದು ಹಿರಿಮೆ ದೊರೆಯಲಿದೆ.

ದೇಶದಲ್ಲಿ ವಿಮಾನ ಚಾಲನೆ ಮಾಡುವ ಪೈಲಟ್ಗಳ ಕೊರತೆಯನ್ನು ನೀಗಿಸಲು ಆರು ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಕೇಂದ್ರ ಸರಕಾರ ಸ್ಥಾಪಿಸುತ್ತಿದ್ದು ಉತ್ತರ ಕರ್ನಾಟಕದಲ್ಲಿ ಯಾವದೇ ವೈಮಾನಿಕ ಶಾಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಖ್ಯಾತಿವೆತ್ತ ಹುಬ್ಬಳ್ಳಿಯಲ್ಲಿ ಈ ತರಬೇತಿ ಕೇಂದ್ರ ತಲೆ ಎತ್ತಲಿರುವುದು ಈ ಭಾಗದ ಜನತೆಗೆ ಸಂತೋಷಕರ ವಿಷಯ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜೋಶಿ, ಈ ಹಿಂದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರದೀಪ್ ಸಿಂಗ್ ಪುರಿ ಹಾಗೂ ಈಗಿನ ವಿಮಾನ ಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳೊಂದಿಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ, ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒತ್ತಾಯ ಮಾಡಿದ್ದು, ನನ್ನ ಬೇಡಿಕೆಗೆ ಸ್ಫಂದಿಸಿರುವ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಈ ಕ್ರಮದಿಂದ ಇಡೀ ಉತ್ತರ ಕರ್ನಾಟಕದ ವಿಮಾನ ಚಾಲನಾ ತರಬೇತಿ ಬಯಸುವ ಯುವಕರಿಗೆ ಇದೊಂದು ಒಳ್ಳೆಯ ಅವಕಾಶ ಸಿಕ್ಕಂತಾಗಿದೆ

ಅಲ್ಲದೇ ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ ಎಂದೂ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒಪ್ಪಿಗೆ ಇತ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ  ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳಿಗೆ  ಸಚಿವ ಜೋಶಿ ಧನ್ಯವಾದ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *