ಜಿಲ್ಲೆ

ಅವೈಜ್ಞಾನಿಕ ಫ್ಲೈ ಓವರ್ ನಿರ್ಮಾಣಕ್ಕೆ ಮೂರು ಗ್ರಾಮಸ್ಥರ ವಿರೋಧ : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಧಾರವಾಡ Prajakiran.com : ರಾಷ್ಟ್ರೀಯ ಹೆದ್ದಾರಿ ನಂ. 4 ಕ್ಕೆ ಹೊಂದಿಕೊಂಡ ಅದರಗುಂಚಿ ಪ್ಲಾಟ್, ಬುಡರಸಿಂಗಿ, ಕೊಟಗೊಂಡಹುಣಸಿ ಗ್ರಾಮಕ್ಕೆ ಫ್ಲೈ ಓವರ್ ನಿರ್ಮಾಣ ಕಾರ್ಯ ಜನರಿಗೆ ತೊಂದರೆ ಮಾಡುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮೂರು ಗ್ರಾಮಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಪ್ಲಾಟ್, ಬುಡರಸಿಂಗಿ, ಕೊಟಗೊಂಡಹುಣಸಿ ಗ್ರಾಮಗಳ ಜನರಿಗೆ ಸಂಚಾರಕ್ಕೆ ಅನಾನುಕೂಲ ಉಂಟಾಗುತ್ತದೆ.

ಅವೈಜ್ಞಾನಿಕವಾಗಿ ಈ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಬದಲಾವಣೆ ಮಾಡಿ ಕೂಡಲೇ ಜನಸಾಮಾನ್ಯರಿಗೆ, ಗ್ರಾಮದ ಮಕ್ಕಳು, ವೃದ್ಧರು, ರೈತಾಪಿ ವರ್ಗದ ಜನರಿಗೆ, ವಿದ್ಯಾರ್ಥಿಗಳಿಗೆ ಗ್ರಾಮಗಳ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬೇಕೆಂದು ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುರೇಶ್ ಬನರೊಟ್ಟಿ, ಗಂಗವ್ವ ಪಾಟೀಲ್, ಮಿನಾಕ್ಷಿ ರಾಮೋಜಿ ಸೇರಿದಂತೆ ಗ್ರಾಮದ ನೂರಾರು ಜನ ಪ್ರತಿಭಟನೆ ನಡೆಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *