ನವದೆಹಲಿ prajakiran.com : ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರುದ್ಧ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ರೈಲ್ವೆ ಟ್ರ್ಯಾಕ್ ಗಳನ್ನು ಸಂಪೂರ್ಣ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ರೈತ ಸಂಘಗಳು ತೀರ್ಮಾನಿಸಿವೆ.
ರೈಲ್ವೆ ಹಳಿಗಳ ಬಂದ್ ಹರಿಯಾಣ ಮತ್ತು ಪಂಜಾಬ್ಗೆ ಸೀಮಿತವಾಗಿಲ್ಲ. ಇದು ದೇಶಾದ್ಯಂತ ನಡೆಯಲಿದೆ ಎಂದು ರೈತ ಮುಖಂಡ ಬೂಟಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಅಲ್ಲದೇ, ಬಂದ್ ಮಾಡುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದರು.