ಅಂತಾರಾಷ್ಟ್ರೀಯ

ಕೇಂದ್ರ ಸರ್ಕಾರ-ರೈತರ ನಡುವಿನ 9ನೇ ಸುತ್ತಿನ ಮಾತುಕತೆಯೂ ವಿಫಲ….!

ನವದೆಹಲಿ prajakiran.com : ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬೆನ್ನಲ್ಲೇ ನಡೆದ 9ನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿತು.

ನವದೆಹಲಿಯ ವಿಜ್ಞಾನ್‌ ಭವನದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳಾಗಿ ರೈಲ್ವೆ ಹಾಗೂ ಆಹಾರ ಸಚಿವ ಪಿಯೂಷ್‌ ಗೋಯಲ್‌, ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಮತ್ತು ವಾಣಿಜ್ಯ ರಾಜ್ಯ ಖಾತೆ ಸಚಿವ ಸೋಮ್‌ ಪ್ರಕಾಶ್‌ ಪಾಲ್ಗೊಂಡಿದ್ದರು. ರೈತರ ಪ್ರತಿನಿಧಿಗಳಾಗಿ 40 ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

ಕೃಷಿ ಸಚಿವ ತೋಮರ್‌ ಮಾತುಕತೆಗೆ ಚಾಲನೆ ನೀಡಿ, `ನೀವು ಸರ್ಕಾರ ಪಟ್ಟು ಹಿಡಿದಿದೆ, ಇದನ್ನು ಅಹಂಕಾರದ ವಿಷಯವನ್ನಾಗಿ ಮಾಡಿಕೊಂಡಿದೆ ಎಂದು ಹೇಳುತ್ತೀರಿ.

ಆದರೆ ನಾವು ನಿಮ್ಮ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದೇವೆ. ಕಾಯ್ದೆ ಹಿಂಪಡೆಯುವ ಒಂದು ಬೇಡಿಕೆಗೆ ಅಂಟಿಕೊಳ್ಳುವ ಬದಲು ಸ್ವಲ್ಪ ಮೃದು ಧೋರಣೆ ತಳೆಯಬಾರದೇಕೆ?’ ಎಂದು ರೈತ ಮುಖಂಡರಿಗೆ ಕೇಳಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ನಾಯಕರು ಮಾಧ್ಯಮಗಳಿಗೆ ತಿಳಿಸಿದರು.

ಸಭೆಯಲ್ಲಿ ಸಚಿವ ತೋಮರ್‌, ಸುಪ್ರೀಂ ಕೋರ್ಟ್‌ ತಜ್ಞ ಸಮಿತಿ ರಚಿಸಿ ನೀಡಿದ ಆದೇಶವನ್ನು ಸ್ವಾಗತಿಸಿ, ‘ನಾವು ಸಮಿತಿ ಎದುರು ನಮ್ಮ ವಾದವನ್ನು ಮಂಡಿಸುತ್ತೇವೆ’ ಎಂದು ತಿಳಿಸಿದರು.

ಜ.19ರಂದು ಕರೆಯಲಾಗಿರುವ ಈ ತಜ್ಞರ ಸಮಿತಿ ಸಭೆಯಲ್ಲಿ ರೈತ ಮುಖಂಡರು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಸಮಿತಿಯ ಸದಸ್ಯರು ಈಗಾಗಲೇ ಕಾಯ್ದೆ ಪರವಾಗಿರುವುದಾಗಿ ತಮ್ಮ ಹೇಳಿಕೆಗಳಿಂದ ಸ್ಪಷ್ಟಪಡಿಸಿದ್ದಾರೆ.

ಹಾಗಾಗಿ ನಾವು ಸಮಿತಿಯ ಬದಲು ಸರ್ಕಾರದೊಂದಿಗೆ ಮಾತುಕತೆ ಮುಂದುವರೆಸಲು ಸಿದ್ಧರಿದ್ದೇವೆ ಎಂದು ರೈತ ನಾಯಕರು ತಿಳಿಸಿದ್ದಾರೆ. 

ರೈತ ಹೋರಾಟದ ಬಗ್ಗೆ ಕಾಳಜಿ ತೋರಿ, ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಯಿಂದ ಈಗಾಗಲೇ ಭೂಪಿಂದರ್‌ ಸಿಂಗ್‌ ಮಾನ್‌ ಹೊರಬಂದಿದ್ದು, ಇನ್ನೊಬ್ಬ ಸದಸ್ಯರು ಹೊರಬರುವ ನಿರೀಕ್ಷೆ ಇದೆ ಎಂದು ರೈತ ಸಂಘಟನೆಗಳ ನಾಯಕರು ಹೇಳಿದ್ದಾರೆ.

ಈ ಸಭೆಯಲ್ಲಿ ರೈತ ಮುಖಂಡರು ಯಾವುದೇ ರೀತಿಯಲ್ಲೂ ಸರ್ಕಾರದ ಮನವಿಗಳಿಗೆ ಸ್ಪಂದಿಸದೇ ಸಭೆ ಅಂತ್ಯಗೊಂಡಿತು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *