ರಾಜ್ಯ

ಮಹಾರಾಷ್ಟ್ರದಿಂದ ಧಾರವಾಡಕ್ಕೆ ಬಂದ ನಾಲ್ವರಿಗೆ ಕರೋನಾ

ಧಾರವಾಡ prajakiran.com : ಧಾರವಾಡದ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಮೂರು ಪ್ರಕರಣ ಬೆಳಕಿಗೆ ಬಂದಿದ್ದರೆ,  ಸಂಜೆ ಮತ್ತೊಂದು  ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಬೆಳಗ್ಗೆ ಪಿ-2156  ನೇ ಸೋಂಕಿತೆಯನ್ನು 33 ವರ್ಷದ ಮಹಿಳೆ, ಪಿ-2157ನೇ ಸೋಂಕಿತ 17 ವರ್ಷದ ಬಾಲಕ, ಪಿ- 2158 ನೇ 2 ವರ್ಷದ 5 ತಿಂಗಳು ಗಂಡು ಮಗು, ಈ ಮೂವರು ಮಹಾರಾಷ್ಟ್ರದಿಂದ ಹಿಂದಿರುಗಿರುವ ಪಿ- 1942, ಪಿ-1943,ಪಿ- 1944 ಹಾಗೂ ಪಿ- 1945 ಅವರೊಂದಿಗೆ ಸಂಪರ್ಕದ ಹಿನ್ನೆಲೆ  ಹೊಂದಿದ್ದಾರೆ. 

ಇವರು ಜಿಲ್ಲೆಗೆ ಬಂದ ಕೂಡಲೇ ಅವರ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಹೀಗಾಗಿ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅಭಯ ನೀಡಿದ್ದಾರೆ.

ಅದೇ ರೀತಿ ಪಿ-2181  ನೇ ಸೋಂಕಿತ 33 ವರ್ಷದ ಪುರುಷ ಇವರು ಕೂಡ ಮಹಾರಾಷ್ಟ್ರ  ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

 ಆ ಮೂಲಕ ಧಾರವಾಡ  ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 43  ಕ್ಕೆ ಏರಿಕೆಯಾಗಿದೆ. ಈ ಪೈಕಿ ಈಗಾಗಲೇ  10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ .

ಉಳಿದವರು  33 ಜನರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *