ಅಂತಾರಾಷ್ಟ್ರೀಯ

ಕರ್ನಾಟಕದ ನಾಲ್ವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ : ಡಿವಿ ಸದಾನಂದಗೌಡ ಸೇರಿ ಹಲವರ ರಾಜೀನಾಮೆ

ನವದೆಹಲಿ prajakiran.com : ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ದೊರಕಿದೆ.

ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಬೀದರ್ ಸಂಸದ ಭಗವಂತ ಖೂಬಾಗೆ ಕೇಂದ್ರ ಸಚಿವ ಸ್ಥಾನ ಒಲಿದಿದೆ.

ಪ್ರಧಾನಿ ಕಚೇರಿಯಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಅವರು ಹೈದ್ರಾಬಾದ್ ಮೂಲಕ ದೆಹಲಿಗೆ ತೆರಳಿದ್ದಾರೆ‌.

ಹೈಕಮಾಂಡ್ ಸೂಚನೆಯಂತೆ ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ, ಆರೋಗ್ಯ ಸಚಿವ ಡಾ. ಹರ್ಷವರ್ಧನ, ಸಾಮಾಜಿಕ ನ್ಯಾಯವಸಚಿವ ತಾವರ್ ಚಂದ್ ಗ್ಲೆಹೋಟ್  ರಾಜೀನಾಮೆ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *