ಅಪರಾಧ

ರಾಯಚೂರು ಜಿಲ್ಲೆಯಲ್ಲಿ ಹಾಡ ಹಗಲೇ ನಾಲ್ವರ ಬರ್ಬರ ಕೊಲೆ





ರಾಯಚೂರು prajakiran.com  : ಹಳೆ ವೈಷಮ್ಯ ಹಾಗೂ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನಾಲ್ವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು, ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೊಲೆಯಾದವರನ್ನು ಸಾವಿತ್ರಮ್ಮ (55), ಶ್ರೀದೇವಿ(38), ಹನುಮೇಶ್ (35) ನಾಗರಾಜ್ (33) ಎಂದು ಗುರುತಿಸಲಾಗಿದೆ.



ಅಲ್ಲದೆ, ಈ ಘಟನೆಯಲ್ಲಿ‌ ಇನ್ನೂ ಮೂವರಿಗೆ  ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಯಚೂರು‌ ಎಸ್ಪಿ ವೇದಮೂರ್ತಿ ತಿಳಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಿಂಧನೂರು ನಗರ ಪೊಲೀಸ್ ಠಾಣೆಯ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಹಾಡಹಗಲೇ ನಾಲ್ವರನ್ನು ಕೊಲೆ ಮಾಡಿರುವುದಕ್ಕೆ ಜನತೆ ಬೆಚ್ಚಿಬಿದ್ದಿದ್ದು, ತೀವ್ರ ಕಳವಳ ವ್ಯಕ್ತಪಡಿಸಿದೆ.

 

 




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *