ಜಿಲ್ಲೆ

ದ್ವಿತೀಯ ಪಿ.ಯು.ಸಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಧಾರವಾಡ prajakiran.com : ಕೋವಿಡ್-೧೯ರ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ ದ್ವಿತೀಯ ಪಿ.ಯು.ಸಿ ಮತ್ತು  ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉಚಿತ ಬಸ್ ವ್ಯವಸ್ಥೆ ಮಾಡಿದೆ. 

೨೦೧೯-೨೦ನೇ ಸಾಲಿನ ಅಂತಿಮ ಪರೀಕ್ಷೆಗಳು ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜೂನ್ ೧೮ ರಂದು ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೂನ್ ೨೫ ರಿಂದ ಜುಲೈ ೦೪ ರವರೆಗೆ ನಡೆಯಲಿವೆ.

ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *