ಜಿಲ್ಲೆ

ಉಚಿತ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಆಗ್ರಹಿಸಿ ಪ್ರತಿಭಟನೆ

ಧಾರವಾಡ prajakiran.com : ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಬಸ್ ಪಾಸ್ ಉಚಿತವಾಗಿ ಒದಗಿಸಲು ಆಗ್ರಹಿಸಿ ಎಐಡಿಎಸ್ಓ
ಧಾರವಾಡ ಜಿಲ್ಲಾ ಸಮಿತಿವತಿಯಿಂದ ವಿದ್ಯಾರ್ಥಿಗಳು ಹಳೆ ಬಸ್ ನಿಲ್ದಾಣದ ಎದುರುಗಡೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ನ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಬೀಳೂರು ಮಾತನಾಡಿ “ಹಿಂದಿನ ವರ್ಷದ ಬಸ್ ಪಾಸಿನ ವಿಸ್ತರಣೆಯ ಅವಧಿ ಮುಗಿದಿದೆ ಆದರೆ ಇನ್ನೂ ಕೆಲವು ಕೋರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ.

ಮತ್ತೆ ಕೆಲವು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗಿದೆ,

ವಿದ್ಯಾರ್ಥಿಗಳು ಈಗ ತಮ್ಮ ಹಳ್ಳಿ ಊರುಗಳಿಂದ ಶಾಲಾ-ಕಾಲೇಜಿಗೆ ಬರಬೇಕಾದರೆ ಬಸ್ ಟಿಕೆಟ್ ಪಾವತಿಸಿ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ.

ಬಹಳಷ್ಟು ದೂರ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ಟಿಕೆಟ್ ದರ ಹೊರೆಯಾಗಿ ಪರಿಣಮಿಸಿದೆ.

ಕಳೆದ ಒಂದೂವರೆ ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ ಜನರ ಜೀವನವನ್ನು ಅತ್ಯಂತ ದುರ್ಬಲಗೊಳಿಸಿದೆ

, ಅಸಂಖ್ಯಾತ ಜನರು ಕಡಿಮೆ ಸಂಬಳಕ್ಕೆ ದುಡಿಯುವ ಸಂದರ್ಭ ಉಂಟಾಗಿದೆ, ಇಂತಹ ಸಂದರ್ಭದಲ್ಲಿ ಸರ್ಕಾರವು ವಿದ್ಯಾರ್ಥಿಗಳ ಜೊತೆಗೆ ನಿಲ್ಲುವುದನ್ನು ಬಿಟ್ಟು ವಿದ್ಯಾರ್ಥಿಗಳಿಂದ ಹಗಲು ದರೋಡೆ ಮಾಡುತ್ತಿದೆ.

ಕಳೆದ ವರ್ಷ ವಿದ್ಯಾರ್ಥಿಗಳು ಪಡೆದಿದ್ದ ವಾರ್ಷಿಕ ಬಸ್ ಪಾಸ್ ಸಂಪೂರ್ಣವಾಗಿ ಉಪಯೋಗವಾಗಿಲ್ಲ

ಕೋವಿಡ್ ಲಾಕ್ಡೌನ್ ಆದ ಪರಿಣಾಮ ಬಹುಪಾಲು ಶಾಲಾ-ಕಾಲೇಜಿಗೆ ರಜೆ ಘೋಷಣೆಯಾಗಿದ್ದು ಆಫ್ಲೈನ್ ತರಗತಿಗಳು ನಡೆದಿಲ್ಲ ಈ ಕಾರಣದಿಂದಾಗಿ ವರ್ಷದ ಮೊದಲಲ್ಲೇ ಸಂಪೂರ್ಣ ಬಸ್ ಪಾಸ್ ದರ ಪಾವತಿಸಿದ್ದರೂ ವಾರ್ಷಿಕ ಬಸ್ ಪಾಸ್ ಅರ್ಧ ವರ್ಷವೂ ಬಳಕೆಯಾಗಿಲ್ಲ.

ಈಗ ಮತ್ತೊಮ್ಮೆ ವಿದ್ಯಾರ್ಥಿಗಳು ಬಸ್ ಪಾಸಿನ ಸಂಪೂರ್ಣ ವೆಚ್ಚ ಭರಿಸಿ ಪಡೆಯಬೇಕಾಗಿರುವುದು ಸರಕಾರದ ಅತ್ಯಂತ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ ಎಂದು ಕಿಡಿಕಾರಿದರು.

ಈಗಾಗಲೇ ಆರ್ಥಿಕವಾಗಿ ಕುಗ್ಗಿರುವ ಕುಟುಂಬಗಳಿಗೆ ಈ ವೆಚ್ಚ ಮತ್ತಷ್ಟು ಹೊರತರುತ್ತದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಮತ್ತು ಅವರ ಆರ್ಥಿಕ ಸ್ಥಿತಿಗತಿಗಳನ್ನು ಸರಕಾರ ಗಮನದಲ್ಲಿರಿಸಿಕೊಂಡು ಪ್ರಸ್ತುತ ವರ್ಷದ ಬಸ್ ಪಾಸನ್ನು ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದರು.

ಹಿಂದಿನ ವರ್ಷದ ಬಸ್ ಪಾಸನ್ನು ಈ ಶೈಕ್ಷಣಿಕ ವರ್ಷ ಪೂರ್ತಿ ಬಳಕೆ ಮಾಡಲು ಸಾರಿಗೆ ಇಲಾಖೆ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರಕಾರಕ್ಕೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರಾದ ಶಶಿಕಲಾ ಮೇಟಿ, ಕಾರ್ಯದರ್ಶಿ ಮಂಡಳಿ ಸದಸ್ಯ ಅರುಣ್ ಕಡಗದ, ಕಾರ್ಯಕರ್ತರಾದ ಮಹೇಶ್, ವರುಣ್ ಹಾಗೂ ವೆಂಕಟೇಶ್ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *