ಹುಬ್ಬಳ್ಳಿ Prajakiran.com : ಬ್ಲಾಕ್ ಫಂಗಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಕೊಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಸದ್ಯ ರಾಜ್ಯದಲ್ಲಿ 250 ಜನ ಬ್ಲಾಕ್ ಫಂಗಸ್ ಸೋಂಕಿತರು ಇದ್ದಾರೆ.
ಹೀಗಾಗಿ ಅವರಿಗೆಲ್ಲ ಬೇಕಾಗಿರು ಸಂಪೂರ್ಣ ಔಷಧವನ್ನು ಸರ್ಕಾರ ಉಚಿತವಾಗಿ ನೀಡಲಿದೆ ಎಂದರು.
ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಶೀಘ್ರದಲ್ಲೇ ಔಷಧಿ ವಿತರಿಸುವುದಾಗಿ ಹೇಳಿದ್ದಾರೆ.
ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತೇವೆ ಎಂದಿದ್ದಾರೆ.