ಬೆಂಗಳೂರು prajakiran.com : ದೇಶ ಸೇರಿದಂತೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ.
ಹಾಗಾಗಿ ರಾಜ್ಯದ ಎಲ್ಲ ಜನರಿಗೂ ಉಚಿತವಾಗಿ ಲಸಿಕೆಯನ್ನು ನೀಡಿ ನೆರವಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಪರಿಸ್ಥಿತಿಯಲ್ಲಿ ಹಣ ಕೊಟ್ಟು ಲಸಿಕೆ ಪಡೆಯಲು ಜನರಿಗೆ ಸಾದ್ಯವಾಗುತ್ತಿಲ್ಲ.
18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಸರ್ಕಾರವೇ ಮುಂದೆ ಬಂದು ಪ್ರಕಟಿಸಬೇಕು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ.
ಈಗ ಕರ್ನಾಟಕದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು ಎಂದು ಸಿಎಂ ಯಡಿಯೂರಪ್ಪನವರಿಗೆ ನನ್ನ ಮನವಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.