ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಕರೋನಾಕ್ಕೆ ಬರೋಬ್ಬರಿ 110 ಸಾವು,  5007 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ110  ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 5007  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ           85870 ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ2037 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು   31347 ಜನ ಗುಣಮುಖರಾಗಿದ್ದು,  52791 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 611 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶುಕ್ರವಾರವೂ 110 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1724 ಕ್ಕೆ ಏರಿಕೆಯಾದಂತಾಗಿದೆ.

ಶುಕ್ರವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ 2267  ಬರೋಬ್ಬರಿ ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ ಮೈಸೂರು 281, ಉಡುಪಿ 190, ಬಾಗಲಕೋಟೆ 184, ದಕ್ಷಿಣ ಕನ್ನಡ 180, ಧಾರವಾಡ 174, ಕಲಬುರಗಿ 159, ವಿಜಯಪುರ 158, ಬಳ್ಳಾರಿ 136, ಹಾಸನ 118, ಬೆಳಗಾವಿ 116, ಗದಗ 108, ರಾಯಚೂರು 107, ಚಿಕ್ಕಬಳ್ಳಾಪುರ 92, ಉತ್ತರಕನ್ನಡ 88, ಬೀದರ 87, ದಾವಣಗೆರೆ 77, ಶಿವಮೊಗ್ಗ 67, ತುಮಕೂರು ಹಾಗೂ ಹಾವೇರಿ ತಲಾ 59,  ಮಂಡ್ಯ 57, ಯಾದಗಿರಿ 53, ಕೊಪ್ಪಳ 39, ಕೋಲಾರ 36, ಚಾಮರಾಜನಗರ 33, ಚಿಕ್ಕಮಗಳೂರು 28, ಬೆಂಗಳೂರು ಗ್ರಾಮಾಂತರ 26, ಚಿತ್ರದುರ್ಗ 13, ರಾಮನಗರ 12,ಕೊಡಗು 3, ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 50 ಜನ ಸಾವನ್ನಪ್ಪಿದ್ದಾರೆ.  

ಮೈಸೂರು 6, ದಕ್ಷಿಣ ಕನ್ನಡ 6, ಕಲಬುರಗಿ, ತುಮಕೂರು ಹಾಗೂ ಧಾರವಾಡ ತಲಾ 5, ಚಿತ್ರದುರ್ಗ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ತಲಾ 3, ಬಳ್ಳಾರಿ, ಹಾಸನ, ಗದಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಕೊಪ್ಪಳ ತಲಾ 2, ಹಾಗೂ ಹಾವೇರಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *