ಅಪರಾಧ

ಗದಗನಲ್ಲಿ ಐಪಿಎಲ್ 20-20 ಕ್ರಿಕೆಟ್ ದಂಧೆಯಲ್ಲಿ ತೊಡಗಿದ್ದ ಐವರ ಸೆರೆ

ಗದಗ prajakiran.com : ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ  ಬುಕ್ಕಿ ಹಾಗೂ ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ಬಂಧಿಸಿದ ಘಟನೆ ಗದಗನಲ್ಲಿ ನಡೆದಿದೆ.

ಬುಧವಾರ ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯ  ಕಳಸಾಪುರ ರಸ್ತೆಯ ಬಾಲಾಜಿನಗರ ಕ್ರಾಸ್ ಹತ್ತಿರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ.

ದಾಳಿ ವೇಳೆ 1,56,320/- ನಗದು ಹಣ ಹಾಗೂ 6 ಮೊಬೈಲ್ ಸಿಕ್ಕಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

ಈ ಬಗ್ಗೆ ಖಚಿತ ಮಾಹಿತಿ ಮಾಹಿತಿ ಮೇರೆಗೆ ಗದಗ ಸಿಪಿಐ ಪಿ.ವಿಸಾಲಿಮಠ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ಜನ ಬೆಟ್ಟಿಂಗ್ ನಲ್ಲಿ ಭಾಗಿಯಾಗಿರುವ ಶಂಕೆ ಮೇರೆಗೆ ಗದಗ ಪೊಲೀಸರು  ತನಿಖೆ ಮುಂದುವರೆಸಿದ್ದಾರೆ.

 ಐಪಿಎಲ್ 20-20 ಕ್ರಿಕೆಟ್ ಆಟದ ಫಲಿತಾಂಶದ ಮೇಲೆ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ನಲ್ಲಿ ತೊಡಗಿದ್ದ 5  ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *