ರಾಜ್ಯ

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗಣಪತಿ ಇಟ್ಟು ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ….!

ಧಾರವಾಡ prajakiran.com : ಕರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣಪತಿ ಪ್ರತಿಷ್ಟಾಪನೆ ನಿಷೇಧ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತ್ತಾಲಿಕ್ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗಣಪತಿ ಇಟ್ಟು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಎಲ್ಲದಕ್ಕೂ ಅವಕಾಶ ನೀಡಲಾಗಿದೆ. ಆದ್ರೆ ಸಾರ್ವಜನಿಕ ಗಣೇಶೋತ್ಸವ ನಿಷೇಧ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಗಣೇಶ ಮೂರ್ತಿ ಇಟ್ಟು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಶ್ರೀರಾಮ ಸೇನೆ ಕಾರ್ಯಕರ್ತರು, ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಟಾಪನೆಯನ್ನು ಮಾಡೇ ಮಾಡ್ತೀವಿ ಎಂದು ಘೋಷಣೆ ಹಾಕಿದರು.

ಕೂಡಲೇ ಸರ್ಕಾರ ಸಾರ್ವಜನಿಕ ಗಣಪತಿ ಮೂರ್ತಿ ಪ್ರತಿಷ್ಠಾನಕ್ಕೆ ಅವಕಾಶ ನೀಡಬೇಕು ಎಂದು ಶ್ರೀ ರಾಮ ಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಒತ್ತಾಯಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *