ಅಂತಾರಾಷ್ಟ್ರೀಯ

ಜೂನ್.28ರವರೆಗೆ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

ಪಣಜಿ prajakiran.com : ಕೊರೋನಾ ಪಾಸಿಟಿವಿಟಿ ದರ ಕಡಿಮೆಯಾಗದಿರುವ ಹಿನ್ನೆಲೆ ಗೋವಾದಲ್ಲಿ ಜೂನ್ 28ರವರೆಗೆ ಕರ್ಫ್ಯೂ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕರ್ಫ್ಯೂ ಅವಧಿಯನ್ನು ಜೂನ್.28ರ ಬೆಳಗ್ಗೆ 7ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಗತ್ಯ ಸೇವೆಗಳಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಿದ್ದು, ಮೀನು ಮಾರುಕಟ್ಟೆ ಓಪನ್ ಇರಲಿದೆ ಎಂದು ತಿಳಿಸಿದ್ದಾರೆ.

ಮೇ 9ರಂದು ಪ್ರಾರಂಭವಾಗ ಲಾಕ್ ಡೌನ್ ಅವಧಿಯನ್ನು ಗೋವಾ ಸರ್ಕಾರ ವಿಸ್ತರಣೆ ಮಾಡುತ್ತಲೇ ಇದ್ದು, ಇದೀಗ ಮತ್ತೆ 1 ವಾರ ಕರ್ಫ್ಯೂ ಮುಂದೂಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *