ಅಪರಾಧ

ಹುಬ್ಬಳ್ಳಿಯಲ್ಲಿ 804 ಗ್ರಾಂ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವನ ಬಂಧನ

ಬೆಲ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವನ ಬಂಧನ

ಹುಬ್ಬಳ್ಳಿ prajakiran.com : ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಒಬ್ಬನನ್ನು ಹುಬ್ಬಳ್ಳಿಯ ಸಿಸಿಬಿ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಎಸ್ಟೇಟ್ ನಿವಾಸಿಯಾಗಿರುವ ಚೇತನ ದೇವೆಂದ್ರಪ್ಪ ಜನ್ನು ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈತ ಭಾನುವಾರ ರಾತ್ರಿ 38.50 ಲಕ್ಷ ಮೌಲ್ಯದ 804.1 ಗ್ರಾಂ ಚಿನ್ನವನ್ನು ಬೆಲ್ಟ್ ನಲ್ಲಿ ಸಾಗಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಸಿಸಿಬಿ ಪೋಲಿಸರು ಖೆಡ್ಡಾಕ್ಕೆ ಕೆಡವಿದ್ದಾರೆ‌.

ಹುಬ್ಬಳ್ಳಿ ಗಿರಣಿ ಚಾಳದ ಏಳು ಮಕ್ಕಳ ತಾಯಿಯ ಗುಡಿಯ ಹಿಂಭಾಗದಲ್ಲಿ ಇತನನ್ನು ಬಂಧಿಸಿದ್ದಾರೆ.

ಬಂಧಿತನಿಂದ ಚಿನ್ನವನ್ನು ವಶಕ್ಕೆ ಪಡೆದುಕೊಂಡ ಸಿಸಿಬಿ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ಅದರ ಹಿಂದಿನ ಜಾಲವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಉಪನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *