ಅಂತಾರಾಷ್ಟ್ರೀಯ

ಧಾರವಾಡ ಕೃಷಿ ವಿವಿಗೆ ರಾಜ್ಯಪಾಲರ ಭೇಟಿ : ಬೇಡಿಕೆಗಳ ಈಡೇರಿಕೆ ಕುರಿತ ಭರವಸೆ ಗೌರವಿಸಿ ಶಿಕ್ಷಕರ ಮುಷ್ಕರ ತಾತ್ಕಾಲಿಕಾಗಿ ಹಿಂದಕ್ಕೆ

ಧಾರವಾಡ prajakiran.com ಅ.18: ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರ ಕಲ್ಯಾಣ ಸಂಘದ ಬೇಡಿಕೆಗಳನ್ನು ಪರಿಗಣಿಸಿ ,ಕಾನೂನು ಚೌಕಟ್ಟಿನಲ್ಲಿ ಅವುಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು.10 ರಿಂದ 12 ದಿನಗಳ ಅವಧಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಈ ಕುರಿತು ಪರಿಹಾರಕ್ಕೆ ಸೂತ್ರ ಒದಗಿಸಲಾಗುವುದು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.

ಕೃಷಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ಶಿಕ್ಷಕರ ಕಲ್ಯಾಣ ಸಂಘ ನಡೆಸುತ್ತಿರುವ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಧರಣಿ ನಿರತರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದರು.

10 ರಿಂದ 12 ದಿನಗಳೊಳಗೆ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ,ಶಿಕ್ಷಕರ ಕಲ್ಯಾಣ ಸಂಘದ ಪ್ರತಿನಿಧಿಗಳು,ರಾಜ್ಯ ಸರ್ಕಾರ ಹಾಗೂ ಯುಜಿಸಿಯ ಅಧಿಕಾರಿಗಳ ಜಂಟಿ ಸಭೆ ಆಯೋಜಿಸಿ ,ಕಾನೂನು ಪರಿಧಿಯೊಳಗೆ ನಿಶ್ಚಿತವಾಗಿ ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು.

ಕಳೆದ ತಿಂಗಳು ವಿ.ವಿ.ಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಈ ಕುರಿತು ಮಾಹಿತಿ ನೀಡಿದ್ದರೆ ಈ ಹೊತ್ತಿಗೆ ಸಮಸ್ಯೆಗೆ ಪರಿಹಾರ ದೊರೆತಿರುತ್ತಿತ್ತು.

ಸಂಘವು ತಕ್ಷಣ ಮುಷ್ಕರ ಕೈ ಬಿಡಬೇಕು, ಶಿಕ್ಷಕರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದನೆ ಸಿಗಲಿದೆ ಎಂದರು.

ಬಡ್ತಿ,ಜೇಷ್ಠತಾ ಪಟ್ಟಿ,ಪಿಂಚಣಿ, ಇತರೆ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆ ಪರಿಗಣನೆ,ನಿವೃತ್ತಿ ವಯೋಮಿತಿ ಏರಿಕೆ,ಜ್ಯೋತಿ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ಶಿಕ್ಷಕರ ಕಲ್ಯಾಣ ಸಂಘದ ಡಾ.ಐ.ಕೆ.ಕಾಳಪ್ಪನವರ,ಡಾ.ಮಹಾಂತೇಶ ನಾಯಕ,ಡಾ.ರಾಮನಗೌಡ ಪಾಟೀಲ ,ಡಾ.ಆರ್.ಹೆಚ್.ಪಾಟೀಲ ಮೊದಲಾದವರು ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯಪಾಲರ ಭೇಟಿ ಮತ್ತು ಬೇಡಿಕೆಗಳ ಈಡೇರಿಕೆ ಕುರಿತ ಭರವಸೆಯನ್ನು ಗೌರವಿಸಿ ಶಿಕ್ಷಕರ ಕಲ್ಯಾಣ ಸಂಘದ ಸದಸ್ಯರು ಕಳೆದ ಅಕ್ಟೋಬರ್ 4 ರಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *