ಬೆಂಗಳೂರು prajakiran.com : ಕೊರೊನಾ 2ನೇ ಅಲೆ ದೇಶದ ಅದೆಷ್ಟೋ ಮಕ್ಕಳನ್ನು ಅನಾಥರನ್ನಾಗಿ ಮಾಡಿದೆ.
ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿವೆ.
ಬಾಲ ಸೇವಾ ಯೋಜನೆ ಕೇಂದ್ರ ಸರಕಾರದ ಸಲಹೆಯ ಮೇರೆಗೆ ರಾಜ್ಯ ಸರಕಾರವು ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಪ್ರಕಟಿಸಿದೆ.
ಈ ಮೂಲಕ ಪ್ರತೀ ತಿಂಗಳು 3,500 ರೂ. ಸಹಾಯ ಧನ ನೀಡಲಾಗುತ್ತದೆ. ಇದಕ್ಕಾಗಿ ಸ್ಪಷ್ಟ ನೀತಿ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ.