ಬೀದರ prajakiran.com : ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ಕರ್ನಾಟಕ ಭೂ – ಸುಧಾರಣೆ ಕಾಯ್ದೆ – 1961, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ – 1966, ಕೈಗಾರಿಕಾ ವ್ಯಾಜ್ಯ ಕಾಯ್ದೆ – 1947, ಕಾರ್ಖಾನೆ ಕಾಯ್ದೆ – 1947 ಗಳ ವಿರುದ್ಧ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಗುಡುಗಿದರು.
ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ನಡೆದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಹಾಯ್ದರು.
ಕೇಂದ್ರ & ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ರೈತರ ಪರವಾಗಿ ಕೆಲಸ ಮಾಡುತ್ತಿಲ್ಲ. ರೈತ ವಿರೋಧಿ ನಿಲುವುಗಳನ್ನು ಹೊಂದಿವೆ ಎಂದು ಕಿಡಿಕಾರಿದರು.
ಸರ್ಕಾರ ಕೂಡಲೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.