ಕಲಘಟಗಿ ಪ್ರಜಾಕಿರಣ.ಕಾಮ್ : ಜಮೀನ ಉಳುಮೆ ಮಾಡುತ್ತಿರುವಾಗ ಟ್ರ್ಯಾಕ್ಟರ್ ಮುಗುಚಿ ಬಿದ್ದ ಪರಿಣಾಮ ಗ್ರಾಪಂ ಸದಸ್ಯ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂರಶೆಟ್ಟಿ ಗ್ರಾಮದ ಸಂತೋಷಕುಮಾರ ಹೊಸಮನಿ (೩೧) ಮೃತ ಯುವಕ.
ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ ಕಟಾವಿನ ನಂತರ ಟ್ರ್ಯಾಕ್ಟರ್ ಮುಖಾಂತರ ಹಿಂಗಾರು ಹಂಗಾಮಿಗೆ ಜಮೀನು ಹದಗೊಳಿಸಲು ಮುಂದಾಗಿದ್ದ.
ಈ ವೇಳೆ ಏಕಾಏಕಿ ಟ್ರ್ಯಾಕ್ಟರ್ ಮುಗುಚಿ ಬಿದ್ದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿಯೇ ಮೃತಪಟ್ಟಿದ್ದಾರೆ.
ಈ ಹಿಂದಿನ ಅವಧಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಸಂತೋಷ ಪ್ರಸ್ತುತ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು.