ಜಮ್ಮು ಕಾಶ್ಮೀರ Prajakiran.com : ಪುಲ್ವಾಮಾ ಜಿಲ್ಲೆಯ ಟ್ರಾಲ್ ಚೌಕ್ ಪ್ರದೇಶದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ವಾಹನದ ಮೇಲೆ ಭಯೋತ್ಪಾದಕರು ಭಾನುವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಏಳು ನಾಗರಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಎಲ್ಲಾ ಸಿಆರ್ಪಿಎಫ್ ಯೋಧರು ಸುರಕ್ಷಿತರಾಗಿದ್ದು,
ಭಯೋತ್ಪಾದಕರಿಗಾಗಿ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿದ್ದಾರೆ.
ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.