ಅಂತಾರಾಷ್ಟ್ರೀಯ

ಸ್ವರಮಾಂತ್ರಿಕ ಪಂಡಿತ ಜಸರಾಜ್ ಇನ್ನಿಲ್ಲ

ನವದೆಹಲಿ prajakiran.com : ಖ್ಯಾತ ಹಿರಿಯ ಗಾಯಕ ಪದ್ಮವಿಭೂಷಣ, ಪಂಡಿತ್ ಜಸರಾಜ್ (90) ಅವರು ಅಮೆರಿಕಾದ ನ್ಯೂಜೆರ್ಸಿಯಲ್ಲಿ ತಮ್ಮ ಮಗಳ ದುರ್ಗಾ ಜಸರಾಜ್ ಮನೆಯಲ್ಲಿ ಹೃದಯಾಘಾತದಿಂದ ಸೋಮವಾರ ವಿಧಿವಶರಾದರು.

ಅವರ ನಿಧನದಿಂದ ಭಾರತೀಯ ಸಂಗೀತ ಲೋಕ ಬಡವಾಗಿದೆ. ದೇಶ ವಿದೇಶದಲ್ಲಿ ಕೂಡ ತಮ್ಮ ಸಂಗೀತ ಕಚೇರಿ ಮೂಲಕ ಜನಮನಸೊರೆಗೊಂಡಿದ್ದರು.

ತಮ್ಮ 80 ವರ್ಷಗಳ ಕಲಾಸೇವೆಯಲ್ಲಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಗಳಿಸಿದ್ದ ಅವರು ಹಲವಾರು ಗಾಯಕರಿಗೆ ಮಾರ್ಗದರ್ಶನ ನೀಡಿದ್ದರು.

ವಿಶ್ವಾದ್ಯಂತ ನೆಲೆಸಿರುವ ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಿಗೆ ಅವರಅಗಲಿಕೆಯನ್ನು ಸಹಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ, ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *