ಅಮೃತಸರ್ prajakiran.com : ದೇಶದಲ್ಲಿ ಕಪ್ಪು, ಹಳದಿ, ಬಿಳಿ ಫಂಗಸ್ ಬಳಿಕ ಇದೀಗ ಹಸಿರು ಫಂಗಸ್ ನ ಆರ್ಭಟ ಹೆಚ್ಚಾಗುತ್ತಿದ್ದು, ಪಂಜಾಬ್ ನಲ್ಲಿ ಗ್ರೀನ್ ಫಂಗಸ್ ನ ಮೊದಲ ಪ್ರಕರಣ ಪತ್ತೆಯಾಗಿದೆ.
ಪಂಜಾಬ್ ನ ಅಮೃತಸರದ 62 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಕಾಣಿಸಿಕೊಂಡಿದೆ. ಕೊರೋನಾದಿಂದ ಗುಣಮುಖರಾದ ಬಳಿಕ ಮತ್ತೆ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಸೇಕ್ರೆಡ್ ಹಾರ್ಟ್ ಆಸ್ಪತ್ರೆಗೆ ದಾಖಲಾಗಿದ್ದರು.
ಪರೀಕ್ಷೆ ವೇಳೆ ಅವರಿಗೆ ಗ್ರೀನ್ ಫಂಗಸ್ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಜಲಂಧರ್ ಸಿವಿಲ್ ಸರ್ಜನ್ ಡಾ. ಬಲ್ವಂತ್ ಸಿಂಗ್ ಅವರು, ರಾಜ್ಯದಲ್ಲಿ ಮೊದಲ ಗ್ರೀನ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಚಿಕಿತ್ಸೆ ಹಾಗೂ ಸೋಂಕು ನಿಯಂತ್ರಿಸುವ ಬಗ್ಗೆ ರಾಜ್ಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ ಎಂದರು.