ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಅನ್ನು ನನಗೆ ನೀಡುವಂತೆ ವರಿಷ್ಠರನ್ನು ಕೇಳಿದ್ದು ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಬಸವರಾಜ ಗುರಿಕಾರ ತಿಳಿಸಿದ್ದಾರೆ.
ಅವರು ಸೋಮವಾರ ಧಾರವಾಡದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಹೀಗಾಗಿ ಈ ಬಾರಿ ಟಿಕೆಟ್ ದೊರಕುವ ವಿಶ್ವಾಸ ಇದೆ ಎಂದರು.
ನಾನು ಸಹ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪರ ಅಲೆ ಇದ್ದು, ಬಿಜೆಪಿ ಸೋಲಿನ ರುಚಿ ತೋರಿಸಲು ನಾನು ಕೆಲಸ ಮಾಡುತ್ತೇನೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಾ ಹೋಗುತ್ತಿದ್ದು, ನನಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಬಸವರಾಜ ಗುರಿಕಾರ ವಿವರಿಸಿದರು.