ರಾಜ್ಯ

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಇನ್ನಿಲ್ಲ….!

ಬೆಂಗಳೂರು prajakiran. com : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಹಿರಿಯ ಪತ್ರಕರ್ತ ಗುರುಲಿಂಗ ಸ್ವಾಮಿ ಹೊಳಿಮಠ (45) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.

ಅವರು ಬೆಳಿಗ್ಗೆ ನಾಗರಬಾವಿಯ ಯೂನಿಟಿ ಜಿಮ್‌ಗೆ ಹೋಗಿದ್ದಾಗ ಏಕಾಎಕಿ ಕುಸಿದು ಬಿದ್ದಿದ್ದರು.

ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಯಾವುದೇ ರೀತಿಯ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕನ್ನಡ ಪ್ರಭ, ಈಟಿವಿ, ಟಿವಿ 5 ಸೇರಿದಂತೆ ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಅವರ ಅಕಾಲಿಕ ನಿಧನ‌ ರಾಜ್ಯದ ಪತ್ರಕರ್ತ ಮಿತ್ರರಿಗೆ ಬರಸಿಡಿಲು ಬಡಿದಂತಾಗಿದೆ‌.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *