ರಾಜ್ಯ

ತಾಂತ್ರಿಕ ಶಿಕ್ಷಣ ನಿರ್ದೇಶಕ ಎಚ್.ಯು.ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ

ಧಾರವಾಡ prajakiran.com : ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್.ಯು.ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯಾತೀತ ಜನತಾದಳ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಸರಕಾರವನ್ನು ಆಗ್ರಹಿಸಿದರು.

ಅವರು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ೧೦ ವರ್ಷಗಳಿಂದ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

೨೦೧೦ ರಿಂದ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಶಾಮೀಲಾಗಿ  ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿರುವ ತಳವಾರ, ಇಲಾಖೆಯ ಎಲ್ಲ ನಿಯಗಳನ್ನು ಗಾಳಿಗೆ ತೂರಿ ಅಪಾರ ಪ್ರಮಾಣದ ಅಕ್ರಮ ಹಣ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಸಂಬಂಧ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಜಿ.ವಿ.ಕೃಷ್ಣರಾವ ನೇತೃತ್ವದಲ್ಲಿ ನಡೆಸಿದ ತನಿಖಾ ವರದಿಯಲ್ಲಿಯೂ ತಳವಾರ ಮಾಡಿದ ಅಕ್ರಮಗಳು ಬಯಲಿಗೆ ಬಂದಿವೆ.

ಇದಲ್ಲದೆ,  ಲೋಕಾಯುಕ್ತ ತನಿಖಾ ವರದಿಯಲ್ಲಿಯೂ ಅವರು ಭಾರೀ ಭ್ರಷ್ಟಾಚಾರ ಎಸಗಿರುವುದು ಸಾಬೀತಾಗಿದೆ ಎಂದು ದೂರಿದರು.

ಹಿಂದಿನ ಸಿದ್ಧರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ತಳವಾರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಡಿಪಿಎಆರ್‌ನಿಂದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಆದೇಶಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ.

ತಳವಾರಗೆ ರಾಜಕೀಯ ವ್ಯಕ್ತಿಗಳ ಬೆಂಬಲ ಕೂಡ ಇರುವ ಸಂಶಯವಿದೆ. ಈ ಹಿನ್ನೆಲೆಯಲ್ಲಿ ಕಳೆದ ೧೦ ವರ್ಷಗಳಿಂದ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಳವಾರ ಅವರನ್ನು ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಬೇಕು.

ಆ ಹುದ್ದೆಯನ್ನು ಆಯುಕ್ತಾಲಯದಲ್ಲಿ ವಿಲೀನ ಮಾಡಬೇಕು ನಿರ್ದೇಶಕ ಸ್ಥಾನಕ್ಕೆ ಐಎಎಸ್ ಅಧಿಕಾರಿಗಳನ್ನು ನೇಮಿಸಬೇಕು.

ಅವರ ವಿರುದ್ದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ರಾಜ್ಯ ಸರಕಾರ ಈ ಬಗ್ಗೆ ಗಮನಹರಿಸದೇ ನಿರ್ಲಕ್ಷ್ಯ ತೋರಿಸಿದರೆ, ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದ ಎಚ್ಚರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *