ಅಂತಾರಾಷ್ಟ್ರೀಯ

ಚಾಮರಾಜನಗರದಲ್ಲಿ ಸಣ್ಣ ವಿಮಾನ ಪತನ : ತಪ್ಪಿದ ಅನಾಹುತ, ಪೈಲಟ್ ಗಳು ಪಾರು….!

ಚಾಮರಾಜನಗರ ಪ್ರಜಾಕಿರಣ.ಕಾಮ್ :

ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದ ಬಳಿ ಸಣ್ಣ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಈ ವಿಮಾನ ಪತನವಾಗಿದೆ.

ವಿಮಾನದಲ್ಲಿ ಇಬ್ಬರು ಪೈಲಟ್ ಗಳು ಇದ್ದು ಅವರು ಪ್ಯಾರಾಚೂಟ್ ಮೂಲಕ ಪಾರಾಗಿದ್ದಾರೆ.

ಪತನವಾದ ವಿಮಾನದ ಅವಶೇಷ ನೋಡಲು ಅಕ್ಕ ಪಕ್ಕದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ.

ಇದು ಹೆಚ್ ಎ ಎಲ್ ಗೆ ಸೇರಿದ ಲಘು ಯುದ್ದ ವಿಮಾನ ಎಂದು ಗೊತ್ತಾಗಿದೆ ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು? ಎಂಬ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *