ರಾಜ್ಯ

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ 7373 ಮತಗಳ ಅಂತರದಿಂದ ಗೆಲುವು

ಹಾವೇರಿ prajakiran.com : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿರುವ ಹಾವೇರಿಯ ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಸೋಲು ಅನುಭವಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.

ಕಳೆದ ಹಲವು ವರ್ಷಗಳಿಂದ ಕ್ಷೇತ್ರದಲ್ಲಿಯೇ ಮನೆ ಮಾಡಿ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಮೂಲಕ ಮನೆ ಮಾತಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಗೆಲುವು ಸಾಧಿಸುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಹಲವು ಸುತ್ತಿನಲ್ಲಿ
ತೀವ್ರ ಜಿದ್ದಾಜಿದ್ಧಿನಿಂದ ಕೂಡಿದ್ದ ಹಾನಗಲ್ ಉಪಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತಂದುಕೊಟ್ಟರೆ, ಬಿಜೆಪಿಗೆ ನಿರಾಸೆ ಮೂಡಿಸಿದೆ.

ಪಕ್ಕದ ಕ್ಷೇತ್ರದ ಅಂದರೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಅವರನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ.

ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರು ಹಾನಗಲ್ ಉಪಚುನಾವಣೆಯಲ್ಲಿ 87490 ಒಟ್ಟು ಮತಗಳನ್ನು ಪಡೆದು, 7373 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 80117 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಕೇವಲ 927 ಮತಗಳನ್ನು ಪಡೆದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *