ರಾಜ್ಯ

ಕಿಲ್ಲರ್ ಕರೋನಾಕ್ಕೆ ಹಾಸನದಲ್ಲಿ ಭಾನುವಾರ ಇಬ್ಬರು ಸಾವು

ಹಾಸನ prajakiran.com : ಜಿಲ್ಲೆಯಲ್ಲಿ ಭಾನುವಾರ ಸಹ ಕೋವಿಡ್ 19 ಗೆ ಇಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಹಾಸನ ನಗರದ 57 ವರುಷದ ಪುರುಷ ಹಾಗೂ ಆಲೂರು ತಾಲ್ಲೂಕಿನ 45 ವರ್ಷದ ಮಹಿಳೆ ಸೋಂಕಿನಿಂದ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಾಸನ‌ ನಗರದ 57 ವರ್ಷದ ಸೋಂಕಿತ ವ್ಯಕ್ತಿ ಜು 5ರಂದು ನಗರದ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜು 10 ರಂದು ಐ.ಸಿ.ಯು ನಲ್ಲಿ ಇರಿಸಿ ವೆಂಟಿಲೇಟರ್ ಸೌಲಭ್ಯ ಒದಗಿಸಲಾಗಿತ್ತು .

ಆದರೆ ಕಳೆದ ರಾತ್ರಿ 1.50 ಗೆ  ಹೃದಯ ಸ್ತಂಭನ ದಿಂದ ಕೊನೆ‌ ಉಸಿರೆಳೆದಿದ್ದಾರೆ ಅದೇ ರೀತಿ ಜು 11ರಂದು ಸೋಂಕಿನಿಂದ ಕೊವಿಡ್ ಆಸ್ಪತ್ರೆಗೆ ದಾಖಲಾಗಿ ಐ.ಸಿ ಯು ನಲ್ಲಿ ಇರಿಸಲಾಗಿದ್ದ  45 ವರ್ಷದ ಮಹಿಳೆ  ಕೂಡ ಭಾನುವಾರ 11:45 ಕ್ಕೆ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ  ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್  ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *