ರಾಜ್ಯ

ಹಾಸನ ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 53 ಜನರಿಗೆ ಕರೋನಾ, ಇಬ್ಬರ ಸಾವು

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಶನಿವಾರ ಮತ್ತೇ ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಹೊಸದಾಗಿ 53 ಜನರಿಗೆ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 845 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಇದುವರೆಗೆ 544 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 275 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 27 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು.

ಇಂದು ಮೃತಪಟ್ಟ 75 ವರ್ಷದ ವ್ಯಕ್ತಿ ಹಾಗೂ 48 ವರ್ಷದ ವ್ಯಕ್ತಿ ಹಾಸನ  ತಾಲ್ಲೂಕಿಗೆ ಸೇರಿದವರಾಗಿದ್ದು, ಸಕ್ಕರೆ ಕಾಯಿಲೆ, ರಕ್ತದ ಒತ್ತಡ ಹಾಗೂ ಉಸಿರಾಟದ ತೊಂದರೆಯಿಂದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸರ್ಕಾರದ ನಿಯಮಾನುಸಾರ ಅವರ ಅಂತ್ಯಕ್ರಿಯೆ ಮಾಡಲಾಗಿದೆ. 16 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ. ಸತೀಶ್ ಮಾಹಿತಿ ನೀಡಿದರು.

ಹೊಸದಾಗಿ ಇಂದು ಪತ್ತೆಯಾದ 53 ಪ್ರಕರಣಗಳಲ್ಲಿ 21 ಜನ ಹಾಸನ ತಾಲ್ಲೂಕಿನವರು, ಇಬ್ಬರು ಆಲೂರು ತಾಲ್ಲೂಕಿನವರು, 6 ಜನ ಅರಸೀಕೆರೆ ತಾಲ್ಲೂಕಿನವರು, ಬೇಲೂರು ತಾಲ್ಲೂಕಿನಲ್ಲಿ 7, ಚನ್ನರಾಯಪಟ್ಟಣ ತಾಲ್ಲೂಕಿನ 6 ಮಂದಿ, ಸಕಲೇಶಪುರ ತಾಲ್ಲೂಕಿನ 5 ಜನ, ಹೊಳೆನರಸೀಪುರ ತಾಲ್ಲೂಕಿನಲ್ಲಿ 4 ಜನ ಹಾಗೂ ಇಬ್ಬರು ಅರಕಲಗೂಡು ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಒಟ್ಟಾರೆ 53 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *