ರಾಜ್ಯ

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 25 ಕೊವಿಡ್-19 ಪ್ರಕರಣ ಪತ್ತೆ

ಹಾಸನ prajakiran.com : ಜಿಲ್ಲೆಯಲ್ಲಿ ಇಂದು ಹೊಸದಾಗಿ 25 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 740 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಇದುವರೆಗೆ 486 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 232 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 22 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು.

ಹೊಸದಾಗಿ ಇಂದು ಪತ್ತೆಯಾದ 25 ಪ್ರಕರಣಗಳಲ್ಲಿ 20 ಜನ ಹಾಸನ ತಾಲ್ಲೂಕಿಗೆ ಸೇರಿದವರಾಗಿದ್ದಾರೆ, ಒಬ್ಬರು ಅರಸೀಕೆರೆ ತಾಲ್ಲೂಕಿಗೆ, ಒಬ್ಬರು ಬೇಲೂರು ತಾಲ್ಲೂಕಿಗೆ ಹಾಗೂ 3 ಜನ ಸಕಲೇಶಪುರ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ. ಸತೀಶ್ ಮನವಿ ಮಾಡಿದ್ದಾರೆ.  

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *