ರಾಜ್ಯ

ಹಾಸನ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗೆ ಪಾಸಿಟೀವ್

ಹಾಸನ :  ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಶಾಲೆಯಲ್ಲಿ ಶನಿವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಒಬ್ಬ ವಿದ್ಯಾರ್ಥಿಗೆ ಪಾಸಿಟೀವ್ ಬಂದಿದೆ ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಣದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ  ಮಾತನಾಡಿ, ಈ ಕುರಿತು ವಿವರ ನೀಡಿದರು.




ಇಂದು ಪತ್ತೆಯಾದ 16 ಪ್ರಕರಣಗಳಲ್ಲಿ ಇಬ್ಬರು ಹಾಸನ ತಾಲ್ಲೂಕಿನವರು, ಮೂವರು ಅರಕಲಗೂಡು ತಾಲ್ಲೂಕಿನವರಾಗಿದ್ದು, ಆರು ಜನ ಅರಸೀಕೆರೆ ತಾಲ್ಲೂಕಿನವರು, ನಾಲ್ವರು ಹೊಳೆನರಸೀಪುರ ತಾಲ್ಲೂಕಿಗೆ ಸೇರಿದವರಾಗಿದ್ದಾರೆ

 ಕೆ.ಆರ್.ನಗರದಿಂದ ಶಸ್ತ್ರ ಚಿಕಿತ್ಸೆಗೆಂದು ಬಂದಿದ್ದ ಮಹಿಳೆಗೆ ಶಸ್ತ್ರ ಚಿಕಿತ್ಸೆಗೂ ಮುನ್ನ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಪಾಸಿಟೀವ್ ಕಂಡುಬಂದಿದೆ ಎಂದು ತಿಳಿಸಿದರು.



 ಆ ವಿದ್ಯಾರ್ಥಿ ಮುಂದೆ ನಡೆಯುವ ಪರೀಕ್ಷೆಗಳನ್ನು ಬರೆಯುವಂತಿಲ್ಲ, ಸಪ್ಲಮೆಂಟರಿ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದರು.

ವಿದ್ಯಾರ್ಥಿಯೊಂದಿಗೆ ಆ ಕೋಠಡಿಯಲ್ಲಿದ್ದ ಇತರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರ ನಿರ್ದೇಶನ ಕೇಳಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು




ಇದೇ ವೇಳೆ ಹಾಸನ ಜಿಲ್ಲೆಯಲ್ಲಿ ಶನಿವಾರ ಮತ್ತೆ ಹೊಸದಾಗಿ 16  ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ    ಸೋಂಕಿತರ ಸಂಖ್ಯೆ 331 ಕ್ಕೆ ಏರಿಕೆಯಾಗಿದೆ.

ಈ ವರೆಗೆ 238 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 92 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಎಂದರು.




ಶನಿವಾರ ಪತ್ತೆಯಾದ 16 ಪ್ರಕರಣಗಳಲ್ಲಿ ಇಬ್ಬರು ಹಾಸನ ತಾಲ್ಲೂಕಿನವರು, ಮೂವರು ಅರಕಲಗೂಡು ತಾಲ್ಲೂಕಿನವರಾಗಿದ್ದು, ಆರು ಜನ ಅರಸೀಕೆರೆ ತಾಲ್ಲೂಕಿನವರು, ನಾಲ್ವರು ಹೊಳೆನರಸೀಪುರ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.

ಕೆ.ಆರ್.ನಗರದಿಂದ ಶಸ್ತ್ರ ಚಿಕಿತ್ಸೆಗೆಂದು ಬಂದಿದ್ದ ಮಹಿಳೆಗೆ ಶಸ್ತ್ರ ಚಿಕಿತ್ಸೆಗೂ ಮುನ್ನ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಪಾಸಿಟೀವ್ ಕಂಡುಬಂದಿದೆ ಎಂದು ತಿಳಿಸಿದರು.

ಶೀತ, ನೆಗಡಿ, ಕೆಮ್ಮು ಲಕ್ಷಣ  ಕಂಡ ಬರುವ ಜನರ ಗಂಟಲ ದ್ರವವನ್ನು ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರಲ್ಲದೆ, ಸರ್ಕಾರದ ನಿರ್ದೇಶನದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.



ಜಿಲ್ಲೆಯ ಒಟ್ಟು 30 ಕಂಟೈನ್ ಮೆಂಟ್ ವಲಯಗಳಲ್ಲಿ 11 ಕಂಟೈನ್ ಮೆಂಟ್ ವಲಯಗಳು 28 ದಿನಗಳನ್ನು ಪೂರ್ಣಗೊಳಿಸಿರುವುದರಿಂದ ಅವುಗಳನ್ನು ತೆರವುಗೊಳಿಸಲಾಗಿದೆ.

ಹೊಳೆನರಸೀಪುರದಲ್ಲಿ 3 ಅರಕಲಗೂಡಿನಲ್ಲಿ 3 ಹಾಗೂ ಹಾಸನದಲ್ಲಿ 2 ಒಟ್ಟು 8 ಹೊಸ ಕಂಟೈನ್ ಮೆಂಟ್ ವಲಯಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರು ಪತ್ರಿಕಾಗೋಷ್ಠೀಯಲ್ಲಿ ಉಪಸ್ಥಿತರಿದ್ದರು.




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *