ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವೈದ್ಯನ ಬಂಧನ, ಜಾಮೀನಿನ ಮೇಲೆ ಬಿಡುಗಡೆ

follow/like: facebook.com/prajakirannews

ಹುಬ್ಬಳ್ಳಿ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವೈದಾಧಿಕಾರಿ ಡಾ. ಪ್ರಭು ಬಿರಾದಾರ ಅವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಅವರ ವಿರುದ್ದ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ  ಪ್ರಕರಣ ದಾಖಲಾಗಿದೆ.

ಈ ಸಂಬಂಧ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಡಾ.  ಬಿರಾದಾರಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿತು.

ಹಲ್ಲೆಕೋರರ ವಿರುದ್ದವೂ ದೂರು :

ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ. ಪ್ರಭು ಬಿರಾದಾರ  ವಿರುದ್ದ  ಮಹಿಳೆ ಹಾಗೂ ಅವರ ಕುಟುಂಬಸ್ಥರು ವಿನಾಕಾರಣ ಆರೋಪ ಮಾಡಿದ್ದಲ್ಲೆ, ಹಲ್ಲೆ ನಡೆಸಿದ್ದಾರೆ ಎಂದು ಡಾ. ಪ್ರಭು ಬಿರಾದಾರ ಸಹುದ್ಯೋಗಿ ದೂರು ದಾಖಲಿಸಿದ್ದಾರೆ.



ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು,ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಮಹಿಳೆ ಹಾಗೂ ಅವರ ಸಹೋದರ ಸೇರಿದಂತೆ 4-5ಜನರ ವಿರುದ್ದ ಪ್ರಕರಣ ದಾಖಲಾಗಿದೆ.

ಮಹಾನಗರ ಪಾಲಿಕೆ ವೈದ್ಯಾಧಿಕಾರಿ  ಡಾ. ಪ್ರಭು ಬಿರಾದಾರ ಮೇಲೆ ದೈಹಿಕ ಹಲ್ಲೆ ನಡೆಸಿದ್ದು, ಮಾನಸಿಕ ನೋವುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಿಬ್ಬಂದಿ ಪ್ರತಿಭಟನೆ :

ಇದೇ ವೇಳೆ ವೈದ್ಯಾಧಿಕಾರಿ ಮೇಲೆ ಹಲ್ಲೆ ಮಾಡಿರುವ ಘಟನೆ ಖಂಡಿಸಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಹಾಗೂ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

 




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *