ರಾಜ್ಯ

ಪಾಪದ ಫಲವನ್ನು ಬಿಜೆಪಿ ಅನುಭವಿಸುತ್ತಿದೆ ಎಂದ ಹೆಚ್.ಡಿ.ಕೆ

ಬೆಂಗಳೂರು prajakiran.com : ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದಿದ್ದಾರೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು.

ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು.

ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಟೀಕಿಸಿದ್ದಾರೆ

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’.

ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ.

ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಬರೆದುಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *