ಬೆಂಗಳೂರು prajakiran.com : ಕಳೆದ ಎರಡು ಮೂರು ದಿನಗಳಿಂದ ಕಾಂಗ್ರೆಸ್ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ದ ಕಾಂಗ್ರೆಸ್ ಟ್ವೀಟರ್ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಟ್ವೀಟ್ ಸರಣಿ ಹೀಗಿದೆ :
ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ದರಾಗಿ ಬಿಟ್ಟಿರಾ? ಎಂದು ಕುಟುಕಿದೆ.
ಅದೇ ರೀತಿ ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂತು ಅಧಿಕಾರ ನಡೆಸುವಾಗ ನಿಮಗೆ ಕಾಂಗ್ರೆಸ್ ಪಕ್ಷದ ನೈತಿಕತೆ ಚೆನ್ನಾಗಿತ್ತು.
ಅಧಿಕಾರ ಇಲ್ಲದಿದ್ದಾಗ ನೈತಿಕತೆ ಪ್ರಶ್ನೆ ಬರುತ್ತದೆಯೇ? ರಾಜ್ಯ ಸಂಕಷ್ಟದಲ್ಲಿರುವಾಗ ಅದೃಶ್ಯರು ಅಪ್ರಸ್ತುತರು ಆಗಿರುವ ನಿಮ್ಮ ಪಕ್ಷದ ನೈತಿಕತೆ ಏನು? ಎಂದು ಪ್ರಶ್ನಿಸಿದೆ.
ಕುಮಾರಸ್ವಾಮಿ ಈ ಹಿಂದೆ ಕಾಂಗ್ರೆಸ್ ವಿರುದ್ದ ಹರಿಹಾಯ್ದು ತಮ್ಮ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ. ಬಿಜೆಪಿ ವಿರುದ್ದ ಮಾಡಿದ್ದ ಆರೋಪಗಳು ಪ್ರಚಾರಕ್ಕೆ ಮಾತ್ರ ಸೀಮಿತವಾಗಿಯೇ ಅಥವಾ ನಿಜವಾಗಿಯೂ ನಿಮಗೆ ರಾಜ್ಯದ ಜನತೆಗೆ ಬಗ್ಗೆ ಕಾಳಜಿಯಿದೆಯೇ ಎಂದು ಕೆದಕಿದ್ದರು.
ಕಾಂಗ್ರೆಸ್ ಕುತಂತ್ರದ ಕುರಿತು ಅಸಮಾಧಾನ ಹೊರಹಾಕಿದ್ದಕ್ಕೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ಟ್ವೀಟರ್ ಖಾತೆ ಮೂಲಕ ಬಹಿರಂಗವಾಗಿ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗು ನಿಲ್ಲುತ್ತದೆ ಎಂಬುದು ಬರುವ ದಿನಗಳಲ್ಲಿ ಕಾದು ನೋಡಬೇಕಿದೆ.