ಎನ್ ಡಿ ಎ ಜೊತೆಗೆ ಕೈ ಜೋಡಿಸಿದ ಜೆಡಿಎಸ್
ಬೆಂಗಳೂರು ಪ್ರಜಾಕಿರಣ.ಕಾಮ್ : ಕಳೆದ ಹಲವಾರು ದಿನಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಇಂದು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆದಿದೆ.
ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು.