ಆಧ್ಯಾತ್ಮ

ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ ಎಂದ ಮಾಜಿ ಸಿಎಂ

ತಮಿಳುನಾಡು ಸರ್ಕಾರ ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂತಹ ಹೆಜ್ಜೆ ಇಟ್ಟಿದೆ  ಹೆಚ್.ಡಿ.ಕೆ

ಬೆಂಗಳೂರು prajakiran.com : ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ.

ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡದಂತೆಯೂ, ಈ ವರ್ಷ ತಮಿಳುನಾಡಿಗೆ ಸಿಗಬೇಕಾದ ನೀರಿನ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.

ಈ ಬಗ್ಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಬೇಕಿದ್ದ ಆಡಳಿತಾರೂಢ ಬಿಜೆಪಿ ಮೈಮರೆತು ಕುಳಿತಿದೆ. ಮೇಕೆದಾಟು ಅಣೆಕಟ್ಟು ಯೋಜನೆ ರೂಪಿಸಲೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಗಿರಲಿಲ್ಲ.

ನನ್ನ ಸರ್ಕಾರ ಅದನ್ನು ಜಾರಿಗೆ ತಂದು ಧೈರ್ಯ ತೋರಿತು.ಆದರೆ, ಅದನ್ನು ಉಳಿಸಿಕೊಳ್ಳಲೂ ಬಿಜೆಪಿಗೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದ ಜನ ಗಮನಿಸಬೇಕು. ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವುದು ಪ್ರಾದೇಶಿಕ ಪಕ್ಷ. ಪ್ರಾದೇಶಿಕತೆ, ಅಸ್ಮಿತೆ ವಿಚಾರದಲ್ಲಿ ತಮಿಳುನಾಡು ಪ್ರಬಲವಾಗಿದೆ.

ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳೇ ಹೆಚ್ಚು ಅಧಿಕಾರದಲ್ಲಿದ್ದರೂ ರಾಜ್ಯದ ಅಸ್ಮಿತೆ, ಪ್ರಾದೇಶಿಕತೆ ರಕ್ಷಣೆ ಸಾಧ್ಯವಾಗುತ್ತಿಲ್ಲ. ರಾಜ್ಯದ ಹಿತರಕ್ಷಣೆಗೆ ಪ್ರಾದೇಶಿಕ ಪಕ್ಷವೇ ಅಗತ್ಯ ಎಂದಿದ್ದಾರೆ.

ಸ್ಟಾಲಿನ್‌ ಒಂದು ಮಾತು ಹೇಳಿದ್ದರು. ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಲಾಗಿರುವ ಎಲ್ಲ ಭಾಷೆಗಳಿಗೆ ಅಧಿಕೃತ ಭಾಷೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದರು.

ಈ ಪ್ರಯತ್ನದಲ್ಲಿ ನಾನೂ ಕೈಜೋಡಿಸುತ್ತೇನೆ. ಆದರೆ, ಅಣ್ಣತಮ್ಮಂದಿರಂತೆ ಇರಬೇಕಾದ ನಾವು ಕಾವೇರಿ ವಿಚಾರದಲ್ಲಿ ಕಲಹಕ್ಕಿಳಿಯುವುದರಲ್ಲಿ ಲಾಭವಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *