ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆಯ ಸದಸ್ಯತ್ವ ರದ್ದು

ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎರಡನೇ ಅವಧಿಯ ಮೇಯರ್ ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧೀಕೃತ ಅಭ್ಯರ್ಥಿಯಾಗಿ ವಾರ್ಡ ಸಂಖ್ಯೆ 54ರಿಂದ ಆಯ್ಕೆಯಾಗಿದ್ದ ಪಾಲಿಕೆ ಸದಸ್ಯೆ ಸರಸ್ವತಿ ವಿನಾಯಕ ಧೋಂಗಡಿಯವರು ಪಕ್ಷ ಜಾರಿ ಮಾಡಿದ ವಿಪ್ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದರು‌.

ಸದರಿ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಅವರು ಪ್ರಾದೇಶಿಕ ಆಯುಕ್ತರಿಗೆ ಲಿಖಿತ ದೂರು ನೀಡಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಪಾಲಿಕೆ ಸದಸ್ಯೆ ಸರಸ್ವತಿ ವಿನಾಯಕ ಧೋಂಗಡಿ ವಿರುದ್ದ ಕ್ರಮ ಜರುಗಿಸಲು ಆಗ್ರಹಿಸಿದ್ದರು.

ಉನ್ನತ ತನಿಖೆ‌ ನಡೆಸಿದ ಪ್ರಾದೇಶಿಕ ಆಯುಕ್ತರು ಎಸ್.ಬಿ. ಶೆಟ್ಟೆಣ್ಣವರ ಕರ್ನಾಟಕ ಸ್ಥಳಿಯ ಪ್ರಾಧಿಕಾರದ ಪಕ್ಷಾಂತರ ಕಾಯ್ದೆಯಡಿ ಪಾಲಿಕೆ ಸದಸ್ಯೆ ಸರಸ್ವತಿ ವಿನಾಯಕ ಧೋಂಗಡಿಯವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಸಾಬೀತಾಗಿದ್ದು, ತಕ್ಷಣವೇ ಅವರನ್ನ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದ್ದಾರೆ.

ಈ ಬೆಳವಣಿಗೆ ಮೂಲಕ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಎಚ್ಚರಿಕೆ ಗಂಟೆಯಾದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *