ರಾಜ್ಯ

ಮೇ. 28ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ : ವೇಳಾಪಟ್ಟಿ ಸಮಯ ಪರಿಷ್ಕರಣೆ

ಧಾರವಾಡ prajakiran.com ಮೇ 23: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ವೇಳಾಪಟ್ಟಿಯ ಸಮಯದಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,ಕರ್ನಾಟಕ ವಿಧಾನಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್,ಉಪಮೇಯರ್ ಚುನಾವಣೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಮಧ್ಯಾಹ್ನ 1.30 ಕ್ಕೆ ಚುನಾವಣೆ ನಡೆಯಲಿದೆ.

ಅಂದು ಬೆಳಿಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾಗುವುದು.

ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು.

ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ, ನಂತರ ಮತಗಳ ಎಣಿಕೆ,ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *