ಜಿಲ್ಲೆ

ಧಾರವಾಡದಲ್ಲಿ ಮಹಾನಗರ ಪಾಲಿಕೆಯಿಂದ ಕಳಪೆ ಕಾಮಗಾರಿ ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಿವಾನಂದ ನಗರದಲ್ಲಿ ಮಾಡಲಾಗಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ.

ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ವಿಷಯ ತಿಳಿಸಿದ್ದರಿಂದ ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ ಕರೆಣ್ಣವರ ಅವರ ನೇತೃತ್ವದಲ್ಲಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.

ಈ ವೇಳೆ ಒಳಚರಂಡಿ ನಿರ್ಮಾಣಕ್ಕೆ ಬಳಸಿದ ಸಿಮೆಂಟ್ ಕಿತ್ತು ಹೋಗಿರುವುದು ಕಂಡು ಬಂದಿದೆ.

ಹೀಗಾಗಿ ಈ ಕುರಿತು ಕಳಪೆ ಕಾಮಗಾರಿ ಬಗ್ಗೆ ಪಕ್ಷದ ಮುಖಂಡರು ಮಹಾನಗರ ಪಾಲಿಕೆ ಆಯುಕ್ತರ ಗಮನಕ್ಕೆ ತರುವ ಕೆಲಸ ಮಾಡಿದರು.

ಇದಕ್ಕೆ ಸ್ಪಂದಿಸಿರುವ ಮಹಾನಗರ ಪಾಲಿಕೆ ಆಯುಕ್ತರು ಆಗಿರುವ ಕಾಮಗಾರಿಯನ್ನು ಕಿತ್ತು ಹಾಕಿ ಹೊಸ ಕಾಮಗಾರಿ ಮಾಡುವುದಾಗಿ ಭರವಸೆ ನೀಡಿದರು.

ಅಲ್ಲದೆ, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸುವುದಾಗಿ ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳಾದ ಶಿವಕಿರಣ ಅಂಗಡಿ, ಸನಾ ಕುದುರಿ, ಹಸನ ಅಲಿ ಶೇಖ, ಮಹಮ್ಮದ್ ಅರ್ಪಾತ, ಅಭಿಷೇಕ ಲದ್ವಾ ಸೇರಿದಂತೆ ಮುಂತಾದವರು ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *